ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಸೂಚನೆ ಆ.15ರಂದು ಬೆಳಗ್ಗೆ ೮.೩೦ ರೊಳಗಾಗಿ ವಿವಿಧ ಇಲಾಖಾ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಕ್ರೀಡಾಂಗಣದಲ್ಲಿ ತಮ್ಮ ಇಲಾಖಾ ಸಿಬ್ಬಂದಿಗಳೊಂದಿಗೆ ಹಾಜರಿರಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು, ಸನ್ಮಾನ ಸಮಾರಂಭಗಳು ನಡೆಯುವಾಗ ಯಾವುದೇ ಗೊಂದಲಗಳಾಗದಂತೆ ಅಚ್ಚುಕಟ್ಟಾಗಿ ಜರುಗುವಂತೆ ಕ್ರಮ ವಹಿಸಬೇಕು.