ಮುಸ್ಲಿಂ ಕಾಲೋನಿಗಳಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ಪಟ್ಟಣದಲ್ಲಿ ಅಲ್ಪಸಂಖ್ಯಾತರು ವಾಸಿಸುವ ಕಾಲೋನಿಗಳಲ್ಲಿ ಗುಣಮಟ್ಟದ ರಸ್ತೆ ,ಚರಂಡಿ ನಿರ್ಮಾಣಕ್ಕೆ 5 ಕೋಟಿ ರು. ಸರ್ಕಾರದಿಂದ ಬಿಡುಗಡೆಯಾಗಿದ್ದು ಈ ಪೈಕಿ ಗ್ರಾಮೀಣ ಪ್ರದೇಶಕ್ಕೆ 1.50 ಕೋಟಿ, ಪಟ್ಟಣದ ನಿವಾಸಿಗಳಿಗೆ 3.50 ಕೋಟಿ ರು.ವೆಚ್ಚದಲ್ಲಿ ಕಾಮಗಾರಿ ಮಾಡಲಾಗುವುದು. ರಸ್ತೆ, ಚರಂಡಿ ಮಾಡುವಾಗ ಸಾರ್ವಜನಿಕರು ಸಹಕರಿಸಬೇಕು ಎಂದು ಎಂಎಲ್‌ಸಿ ಆರ್. ರಾಜೇಂದ್ರ ತಿಳಿಸಿದರು.