ಅತ್ತೆಯನ್ನೇ 18 ತುಂಡಾಗಿ ಕತ್ತರಿಸಿದ ಅಳಿಯ!ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚಿಂಪುಗಾನಹಳ್ಳಿ ಬಳಿ ಬೆಳ್ಳಾವಿಯ ಲಕ್ಷ್ಮಿದೇವಮ್ಮ (42) ಎಂಬುವರನ್ನು ಕೊಲೆ ಮಾಡಿ, ದೇಹವನ್ನು ತುಂಡು, ತುಂಡುಗಳಾಗಿ ಕತ್ತರಿಸಿ, ದೇಹದ ಅಂಗಾಂಗಗಳನ್ನು ವಿವಿಧ ಕಡೆ ಬಿಸಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.