ಸಾಮಾನ್ಯ ಜ್ಞಾನ ಹೆಚ್ಚಿಸಿಕೊಂಡರೆ ಸಾಧನೆ ಸಾಧ್ಯ: ನಾ.ಸು.ನಾಗೇಶವಿದ್ಯಾರ್ಥಿ ಜೀವನ ಬಹಳ ಸುಂದರ, ಸಂಭ್ರಮ ಮತ್ತು ಮಹತ್ವವಾದದ್ದು. ಶಿಕ್ಷಣದ ಜೊತೆಗೆ ಶಿಸ್ತು, ವಿನಯ, ವ್ಯವಧಾನ, ಜಾಗೃತಿ, ಅಧ್ಯಯನ ಮತ್ತು ಸಾಮಾನ್ಯ ಜ್ಞಾನಗುಣ ಅಳವಡಿಸಿಕೊಳ್ಳಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಮಹನೀಯರ ಸಾಧನೆಗಳ ಬಗ್ಗೆ ತಿಳಿದುಕೊಳ್ಳಬೇಕು. ರಸಪ್ರಶ್ನೆಯಂತಹ ಕಾರ್ಯಕ್ರಮ ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಹೆಚ್ಚಿಸುತ್ತವೆ.