ವಾರಾಂತ್ಯದ ಹಿನ್ನೆಲೆಯಲ್ಲಿ ಹಾಸನಾಂಬೆ ದೇವಿಯ ದರ್ಶನಕ್ಕೆ ಭಾನುವಾರ ಭಕ್ತಸಾಗರವೇ ಹರಿದು ಬಂತು.
ದರ್ಶನದ ಎಲ್ಲಾ ಸಾಲುಗಳು ತುಂಬಿ ತುಳುಕಿದ್ದವು. ಆದರೂ, ದರ್ಶನಕ್ಕೆ ಯಾವುದೇ ಅಡಚಣೆ ಉಂಟಾಗಲಿಲ್ಲ, ಅವ್ಯವಸ್ಥೆ ಕಾಣಿಸಲಿಲ್ಲ. ಭಕ್ತರಿಗೆ ಅತ್ಯಂತ ತ್ವರಿತವಾಗಿ ಮತ್ತು ಸುಲಲಿತವಾಗಿ ದೇವಿಯ ದರ್ಶನವಾಯಿತು.