ಧರ್ಮಸ್ಥಳ ಪ್ರಕರಣ ಸಂಬಂಧ ಎಸ್‌ಐಟಿ ಮಧ್ಯಂತರ ವರದಿ ಪ್ರಕಟಿಸಲಿಹಿರಿಯ ಮುಖಂಡರು, ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರನ್ನು ಭೇಟಿಯಾಗಿ ಕೆಲ ಬೇಡಿಕೆ ಈಡೇರಿಸಲು ಒತ್ತಾಯಿಸಲಿದ್ದಾರೆ. ಇಲ್ಲಿನ ವರೂರಿನಲ್ಲಿ ಜೈನಮುನಿ ಶ್ರೀ ಗುಣಧರನಂದಿ ಮಹಾರಾಜರ ನೇತೃತ್ವದಲ್ಲಿ ರಾಜ್ಯದ ವಿವಿಧ ಪ್ರದೇಶದ ಜೈನ ಸಮಾಜದ ಮುಖಂಡರು ಸಭೆ ನಡೆಸಿ ಈ ನಿರ್ಧಾರ ಕೈಗೊಂಡರು.