೧೩ರಂದು ಅಂಬಿಕಾ ಆವರಣಕ್ಕೆ ಆಚಾರ್ಯ ಕೆ.ಆರ್.ಮನೋಜ್ ಜಿ ಆಗಮನನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಶಿಕ್ಷಣ ವ್ಯವಸ್ಥೆಗೆ ಇಪ್ಪತ್ತೈದು ವರ್ಷ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ವಿದ್ಯಾಲಯಕ್ಕೆ ಹತ್ತು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ರೂಪಿಸಲಾಗಿರುವ ವಿದ್ಯಾಲಯದ ಕಟ್ಟಡದ ನೂತನ ಅಂತಸ್ತು, ವ್ಯಾಯಾಮಶಾಲೆ, ಸಭಾಂಗಣವನ್ನು ಆಚಾರ್ಯ ಮನೋಜ್ ಜಿ ಉದ್ಘಾಟಿಸಲಿದ್ದಾರೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಲಕ್ಷ್ಮೀಶ ತೋಳ್ಪಾಡಿ ಅಧ್ಯಕ್ಷತೆ ವಹಿಸುವರು.