ಮೂಡುಬಿದಿರೆ: ತೋಟಗಾರಿಕಾ ಬೆಳೆಗಳ ಸಂಸ್ಕರಣೆ ತರಬೇತಿಮಂಗಳೂರು ಜಿಲ್ಲಾ ಪಂಚಾಯಿತಿ ತೋಟಗಾರಿಕಾ ಇಲಾಖೆ, ಮೂಡುಬಿದಿರೆ ಕೃಷಿ ವಿಚಾರ ವಿನಿಮಯ ಕೇಂದ್ರ, ರೈತ ಜನ್ಮಯ ರೈತ ಉತ್ಪಾದಕರ ಕಂಪನಿ, ಮೂಡುಬಿದರೆ ಕೋ ಆಪರೇಟಿವ್ ಸರ್ವಿಸ್ ಸೊಸೈಟಿಗಳ ಸಹಭಾಗಿತ್ವದಲ್ಲಿ ತೋಟಗಾರಿಕೆ ಪಿತಾಮಹ ದಿ.ಡಾ. ಎಂ.ಎಚ್. ಮರಿಗೌಡ ಜನ್ಮ ದಿನಾಚರಣೆ ಅಂಗವಾಗಿ ತೋಟಗಾರಿಕೆ ಬೆಳೆಗಳಲ್ಲಿ ಸಂಸ್ಕರಣೆ, ಯೋಜನೆ, ತರಬೇತಿ ಹಾಗೂ ಚರ್ಚಾ ಗೋಷ್ಠಿ ಮೂಡುಬಿದಿರೆ ಕೋ ಆಪರೇಟಿವ್ ಸರ್ವಿಸ್ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.