• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳೆ ಹಾನಿ ಪರಿಹಾರ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ: ಸಚಿವ ಚಲುವರಾಯಸ್ವಾಮಿ
ಅಧಿಕ ಮಳೆಯಿಂದಾಗಿ ಸಿಡಿಎಸ್ ನಾಲೆ ಒಡೆದು ಕೃಷಿ ಬೆಳೆ ಹಾಗೂ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಮಳೆ ನಿಂತ ನಂತರ ಜಂಟಿ ಸರ್ವೇ ಕಾರ್ಯಾಚರಣೆ ನಡೆಸಿ ಬೆಳೆ ಎಷ್ಟು ಹಾನಿಯಾಗಿದೆ ಎಂದು ತಿಳಿದುಕೊಂಡು ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.
ಶ್ರೀರಾಮದೇವಸ್ಥಾನ ಮುಜರಾಯಿ ಇಲಾಖೆ ವಶಕ್ಕೆ 2 ದಿನಗಳ ಗಡುವು
ಸರ್ಕಾರ ಹಾಗೂ ಹೈಕೋರ್ಟ್ ಆದೇಶದ ಮೇರೆಗೆ ಶ್ರೀರಂಗಪಟ್ಟಣ ತಾಲೂಕಿನ ಹಳೇ ಕಿರಂಗೂರು ಗ್ರಾಮದ ಬಳಿ ಇರುವ ಶ್ರೀರಾಮ ದೇವಸ್ಥಾನವನ್ನು ವಶಕ್ಕೆ ಪಡೆಯಲು ಬಂದಿದ್ದ ಅಧಿಕಾರಿಗಳು 2 ದಿನಗಳ ಕಾಲ ಗಡುವು ನೀಡಿ ಹೊರ ನಡೆದ ಘಟನೆ ನಡೆಯಿತು.
ದರ್ಶನದ ವ್ಯವಸ್ಥೆಗೆ ಸಂಸದ ಸುನೀಲ್ ಬೋಸ್ ಮೆಚ್ಚುಗೆ
ಸಂಸದ ಸುನೀಲ್ ಬೋಸ್ ಅವರು ಕುಟುಂಬ ಸಮೇತರಾಗಿ ದೇವಿಯ ದರ್ಶನ ಪಡೆದರು. ದೇವಾಲಯದ ಒಳಗೆ ಮತ್ತು ಹೊರಗಿನ ವ್ಯವಸ್ಥೆ ಸೇರಿದಂತೆ ವಿವಿಧ ಸೌಲಭ್ಯಗಳ ಅಚ್ಚುಕಟ್ಟಾದ ವ್ಯವಸ್ಥೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಭಕ್ತರು ಯಾವುದೇ ತೊಂದರೆ ಇಲ್ಲದೆ, ಸುಗಮವಾಗಿ ದೇವಿಯ ದರ್ಶನ ಪಡೆಯುತ್ತಿದ್ದಾರೆ. ಇದಕ್ಕಾಗಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ದೇವಾಲಯದ ಆಡಳಿತ ಮಂಡಳಿಯ ಶ್ರಮ ಪ್ರಶಂಸನೀಯ ಎಂದರು. ಹಾಸನಾಂಬೆ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭಕ್ತರ ಭಕ್ತಿ ಪರವಶದ ವಾತಾವರಣ ನಿರ್ಮಾಣವಾಗಿದ್ದು, ಸಾವಿರಾರು ಮಂದಿ ದಿನವೂ ದರ್ಶನಕ್ಕಾಗಿ ಆಗಮಿಸುತ್ತಿದ್ದಾರೆ. ಸಂಸದರು ದೇವಾಲಯದ ಒಳಭಾಗದಲ್ಲಿ ದೇವಿಯ ಪಾದಪೂಜೆ ಸಲ್ಲಿಸಿ, ತಮ್ಮ ಕುಟುಂಬದವರೊಂದಿಗೆ ವಿಶೇಷ ಪೂಜೆ ನೆರವೇರಿಸಿದರು.
ಮಠಗಳಿಂದ ಶಿಕ್ಷಣಕ್ಕೆ ಹೊಸ ಬುನಾದಿ, ಮೌಲ್ಯಯುತ ಶಿಕ್ಷಣ: ಶ್ರೀಶಿವಶಿದ್ದೇಶ್ವರ ಸ್ವಾಮೀಜಿ
ಮಠಗಳು ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಸಮುದಾಯಕ್ಕೆ ಧರ್ಮಪ್ರಜ್ಞೆ ಮೂಡಿಸುತ್ತಿವೆ. ತ್ರಿವಿಧ ದಾಸೋಹ, ನಿರುದ್ಯೋಗ ಸಮಸ್ಯೆ ನಿವಾರಣೆ, ನೆರೆಯ ಸಂದರ್ಭದಲ್ಲಿ ಸರ್ಕಾರಗಳ ಜತೆಗೆ ಕೈಜೋಡಿಸುವುದು. ಸಾಮಾಜಿಕ ನೆಲೆಕಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಸಾಹಿತ್ಯ, ಸಂಗೀತ ಕ್ಷೇತ್ರಕ್ಕೂ ಆದ್ಯತೆ ನೀಡುತ್ತಿವೆ.
ಚನ್ನರಾಯಪಟ್ಟಣದಲ್ಲಿ ಮಹಿಳೆ ಮೇಲೆ ಕಾಡುಕೋಣ ದಾಳಿ
ವಿದ್ಯಾನಗರದಲ್ಲಿ ಕಾಣಿಸಿಕೊಂಡ ಕಾಡುಕೋಣ ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. 54 ವರ್ಷದ ಶಾಂತಮ್ಮ ಗಂಭೀರವಾಗಿ ಗಾಯಗೊಂಡ ಮಹಿಳೆಯಾಗಿದ್ದು, ಶನಿವಾರ ಬೆಳಗ್ಗೆ 8 ಗಂಟೆಯ ಸಮಯದಲ್ಲಿ ಘಟನೆ ನಡೆದಿದೆ. ಶಾಂತಮ್ಮ ಎಂದಿನಂತೆ ಹಂದಿ ಮೇಯಿಸಲು ಬಂದಿದ್ದರು. ಇದೇ ವೇಳೆ ಹಂದಿಗಳಿರುವ ಜಾಗಕ್ಕೆ ಕಾಡುಕೋಣವೊಂದು ಬಂದಿದೆ. ಆದರೆ ಶಾಂತಮ್ಮ, ಎಮ್ಮೆ ಎಂದು ತಿಳಿದು, ಅದನ್ನು ಓಡಿಸಲು ಮುಂದಾದಾಗ ಆಕೆಯ ಮೇಲೆ ದಾಳಿ ನಡೆಸಿದ್ದು, ದಾಳಿಯಿಂದ ಶಾಂತಮ್ಮ ಅವರ ಎಡಗೈ ಮುರಿದಿದೆ. ಅಲ್ಲದೇ ಜೋರಾಗಿ ನೆಲಕ್ಕೆ ಬಿದ್ದ ಪರಿಣಾಮ ಹೊಟ್ಟೆ ಹಾಗೂ ಕೈ ಕಾಲಿಗೆ ಗಾಯವಾಗಿದೆ.
ಮಂಡ್ಯ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಕೃಷಿ ಸಚಿವರ ಭೇಟಿ, ಪರಿಶೀಲನೆ
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಗೀಡಾದ ಮಂಡ್ಯ ನಗರದ ಕೆ.ಎಚ್.ಬಿ. ಬಡಾವಣೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಶಾಸಕ ಪಿ.ರವಿಕುಮಾರ್ ಶನಿವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೊಗಳ್ಳಿ ಗಣೇಶ್‌ಗೆ ಮರಣೋತ್ತರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ
ಡಾ.ಮೊಗಳ್ಳಿ ಗಣೇಶ್ ಅವರು ಅಕ್ಷರವನ್ನೇ ತಮ್ಮ ಅಸ್ತ್ರವಾಗಿಸಿಕೊಂಡು ಕಥೆ, ಕಾದಂಬರಿ, ಪ್ರಬಂಧ, ಸಂಶೋಧನ ಕೃತಿ, ಬೀದಿನಾಟಕ, ಕಾವ್ಯ ಹೀಗೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕೃಷಿಯನ್ನು ಮಾಡಿ ಪ್ರಖ್ಯಾತಿಯನ್ನು ಗಳಿಸಿದ್ದು ಇವರ ಸಾಹಿತ್ಯ ರಾಜ್ಯ , ರಾಷ್ಟ್ರ, ಅಂತಾರಾಷ್ಟ್ರಮಟ್ಟದಲ್ಲಿ ಮನ್ನಣೆಯನ್ನು ಪಡೆದಿದೆ.ಇವರ ಸಾಹಿತ್ಯ ಸೇವೆ ನಾಡಿಗೆ ಆಗಾಧವಾಗಿದೆ ಸದಾ ಸಮಾಜ ಜಾತಿ ಧರ್ಮ ವರ್ಣ ವ್ಯವಸ್ಥೆಯ ವಿರುದ್ಧ ಬೇಸರಗೊಂಡಿದ್ದರು. ಕುವೆಂಪು, ಪೂರ್ಣಚಂದ್ರತೇಜಸ್ವಿ, ಪಿ.ಲಂಕೇಶ್, ದೇವನೂರು ಮಹಾದೇವ, ಸಿದ್ದಲಿಂಗಯ್ಯ ಅವರ ಬರಹಗಳ ಬಗ್ಗೆ ಅಪಾರವಾದ ಪ್ರೀತಿ ಇತ್ತು. ಇವರು ಸ್ವಾಭಿಮಾನಿ, ಮಾತು ಮೆದುವಾದರೂ ಬಹಳ ಅರ್ಥಗರ್ಭಿತವಾಗಿರುತ್ತಿತ್ತು ಎಂದರು.
ವೋಟ್ ಚೋರಿ ವಿರುದ್ಧ ಕಾಂಗ್ರೆಸ್ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ
ಮತಗಳ್ಳತನ ಮಾಡುವ ಮೂಲಕ ಬಿಜೆಪಿ ಅಧಿಕಾರ ಹಿಡಿಯುತ್ತಿದೆ. ಮತದಾರರ ಪಟ್ಟಿಯಲ್ಲಿ ಸುಳ್ಳು ಹೆಸರು ಇರುವುದನ್ನು ಕಾಂಗ್ರೆಸ್ ಸಾಕ್ಷ್ಯ ಸಮೇತ ಜನರ ಮುಂದಿಟ್ಟಿದೆ. ಒಬ್ಬ ಮತದಾರ ಹಲವು ಕ್ಷೇತ್ರಗಳಲ್ಲಿ ಮತ ಚಲಾವಣೆ ಮಾಡಿರುವುದು ಪತ್ತೆಯಾಗಿದೆ. ಇದರ ವಿಡಿಯೋ ದಾಖಲೆಗಳನ್ನು ಬಿಡುಗಡೆ ಮಾಡಲು ಚುನಾವಣಾ ಆಯೋಗ ಮೀನಮೇಷ ಎಣಿಸುತ್ತಿದೆ.
ಹಾಸನಾಂಬೆಯ ಸುಗಮ ದರ್ಶನಕ್ಕೆ ಭಕ್ತರ ಮೆಚ್ಚುಗೆ
ಕಳೆದ ವರ್ಷ ಅದ್ವಾನಗಳ ಆಗರವಾಗಿ ತಳ್ಳಾಟ ನೂಕಾಟ, ಲಾಠಿ ಚಾರ್ಜ್‌, ಹೀಗೆ ಹತ್ತು ಹಲವು ಗೊಂದಲಗಳ ಗೂಡಾಗಿದ್ದ ಹಾಸನಾಂಬೆ ದರ್ಶನೋತ್ಸವ ಈ ಬಾರಿ ಸುಸೂತ್ರವಾಗಿ ನಡೆಯುತ್ತಿದೆ. ಇದಕ್ಕೆಲ್ಲಾ ಮುಖ್ಯ ಕಾರಣ ವಿಐಪಿ ಹಾಗೂ ವಿವಿಐಪಿ ಪಾಸ್‌ಗಳನ್ನು ರದ್ಧು ಮಾಡುವುದರ ಜತೆಗೆ ದರ್ಶನಕ್ಕೆ ಬರುವ ವಿಐಪಿಗಳಿಗೆ ಜಿಲ್ಲಾಡಳಿತವೇ ಪ್ರತ್ಯೇಕ ವ್ಯವಸ್ಥೆ ಮಾಡಿರುವುದು. ಇದರ ಮಾಸ್ಟರ್‌ ಮೈಂಡ್‌ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ. ಹಾಗಾಗಿ ಈ ಬಾರಿ ಸಾಮಾನ್ಯ ಜನರಿಗೂ ಹಾಸನಾಂಬೆ ದರ್ಶನ ಸುಸೂತ್ರವಾಗಿ ನಡೆಯುತ್ತಿದ್ದು, ದರ್ಶನ ಪಡೆದ ಭಕ್ತರೆಲ್ಲಾ ಈ ಬಾರಿಯ ವ್ಯವಸ್ಥೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಹಾಸನಾಂಬೆಯ ದರ್ಶನ ಪಡೆದ ಶಾಸಕ ಅರವಿಂದ್ ಬೆಲ್ಲದ್
ಶಾಸಕ ಅರವಿಂದ್ ಬೆಲ್ಲದ್ ಅವರು ಶನಿವಾರ ತಮ್ಮ ಕುಟುಂಬ ಸಮೇತರಾಗಿ ಶ್ರೀ ಹಾಸನಾಂಬ ದೇವಿಯ ದರ್ಶನ ಪಡೆದರು. ದರ್ಶನದ ಬಳಿಕ ಮಾತನಾಡಿದ ಅವರು, ಹಾಸನಾಂಬೆಯ ಜಾತ್ರಾ ಉತ್ಸವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಬಾರಿ ಜಿಲ್ಲಾಡಳಿತ ವಿವೇಕದಿಂದ ಕಾರ್ಯನಿರ್ವಹಿಸಿ, ವಿವಿಐಪಿಗಳಿಗೆ ಸರ್ಕಾರಿ ವಾಹನ ವ್ಯವಸ್ಥೆ ಮಾಡಿರುವುದು ಉತ್ತಮ ಬೆಳವಣಿಗೆ ಎಂದು ಶ್ಲಾಘಿಸಿದರು. ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬ ದೇವಿಯ ದರ್ಶನ ಪಡೆದು ನಾವು ಪುನೀತರಾಗಿದ್ದೇವೆ ಎಂದು ಅವರು ಭಕ್ತಿಭಾವದಿಂದ ಹೇಳಿದರು.
  • < previous
  • 1
  • ...
  • 588
  • 589
  • 590
  • 591
  • 592
  • 593
  • 594
  • 595
  • 596
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved