ಜಿಲ್ಲಾ ಪತ್ರಕರ್ತರ ಸಂಘ ಚುನಾವಣೆಗೆ ಚುನಾವಣಾಧಿಕಾರಿಯಾಗಿ ರಾಜೇಶ್ ನೇಮಕನವೆಂಬರ್ ತಿಂಗಳಲ್ಲಿ ನಡೆಯಲಿರುವ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯ ಹಿನ್ನೆಲೆಯಲ್ಲಿ, ಜಿಲ್ಲಾ ಚುನಾವಣಾಧಿಕಾರಿಯಾಗಿ ಹಿರಿಯ ಪತ್ರಕರ್ತರಾದ ಜ್ಞಾನದೀಪ ರಾಜೇಶ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ. ಎಚ್. ವೇಣುಕುಮಾರ್ ಅವರು ಆದೇಶದ ಪ್ರತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ವೇಣುಕುಮಾರ್ ಅವರು, ಈ ಬಾರಿ ನಡೆಯಲಿರುವ ಸಂಘದ ಚುನಾವಣೆ ಸಂಪೂರ್ಣ ನಿಷ್ಪಕ್ಷಪಾತವಾಗಿ, ಯಾವುದೇ ಬಾಹ್ಯ ಪ್ರಭಾವ ಅಥವಾ ಒತ್ತಡಗಳಿಲ್ಲದೇ, ಶಿಸ್ತಿನಿಂದ ಸಾಗುವಂತೆ ವಿನಂತಿಸುತ್ತೇನೆ ಎಂದು ಹೇಳಿದರು.