45ಕ್ಕೂ ಅಧಿಕ ಜನರನ್ನು ಕಚ್ಚಿ ಗಾಯಗೊಳಿಸಿದ ಮಂಗಗುಳೇದಗುಡ್ಡ ಪಟ್ಟಣದಲ್ಲಿ ಮೂರು ದಿನಗಳಿಂದ 45ಕ್ಕೂ ಅಧಿಕ ಜನರ ಮೇಲೆ ದಾಳಿ ಮಾಡಿ ಕಚ್ಚಿ ಗಂಭೀರ ಗಾಯಗೊಳಿಸಿ ಹುಚ್ಚಾಟ ನಡೆಸಿದ್ದ ಮಂಗನನ್ನು ಗದಗ ಪ್ರಾಣಿ ಸಂಗ್ರಹಾಲಯದ ಪಶುವೈದ್ಯಾಧಿಕಾರಿ ಡಾ.ಪವಿತ್ರಾ ರೇವಡಿ, ನಿಖಿಲ ಕುಲಕರ್ಣಿ ಅವರು ಶುಕ್ರವಾರ ಅರಿವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.