ಬೆಣ್ಣೆಹಳ್ಳ ಪ್ರವಾಹಕ್ಕೆ ಅಪಾರ ಬೆಳೆ ಹಾನಿ, ಸಂಚಾರ ಸ್ಥಗಿತಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ತಾಲೂಕಿನ ಹಲವೆಡೆ ಜನ ಜೀವನ ಅಸ್ತವ್ಯವಸ್ಥವಾಗಿದ್ದು, ರೈತರ ಜಮೀನುಗಳು ಸಂಪೂರ್ಣ ಜಲಾವೃತವಾಗಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ, ಹಲವಡೆ ರಸ್ತೆ ಸಂಚಾರ ಸ್ಥಗಿತವಾಗಿ ಜನತೆ ತೀವ್ರ ತೊಂದರೆ ಅನುಭವಿಸುವಂತಾಗಿದೆ.