ಹಿಂದುಗಳ ಪುಣ್ಯಕ್ಷೇತ್ರಗಳ ಬಗ್ಗೆ ಅಪನಂಬಿಕೆ ಮೂಡಿಸುವ ಹುನ್ನಾರ: ವಚನಾನಂದ ಶ್ರೀಭಾರತದ ಯಾವೊಬ್ಬ ಹಿಂದೂ ಗುರು ಮತಾಂತರ, ಧರ್ಮಾಂತರ ಮಾಡಲ್ಲ. ಧರ್ಮದ ತತ್ವ, ಸಿದ್ಧಾಂತಗಳನ್ನು ಬಿತ್ತುತ್ತಿದ್ದೇವೆ. ಧರ್ಮಸ್ಥಳ, ಶಬರಿಮಲೆ ಇನ್ನೂ ಅನೇಕ ಕಡೆ ಅಧ್ಯಾತ್ಮ ಗುರುಗಳು ಕೈಗೊಂಡ ಒಳ್ಳೆಯ ಕಾರ್ಯಗಳನ್ನು ಬಿಟ್ಟು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದರು.