ಕಾಯಕವೇ ಲಿಂಗ ಪೂಜೆ ಸಂದೇಶ ಸಾರಿದವರು ಶರಣ ನುಲಿಯ ಚಂದಯ್ಯ-ಸಚಿವ ಎಚ್.ಕೆ. ಪಾಟೀಲಕಾಯಕ ಮತ್ತು ದಾಸೋಹದ ಮೂಲಕ ಸಮಾಜಕ್ಕೆ ಬೆಳಕು ನೀಡಿದವರಲ್ಲಿ ಶರಣ ನುಲಿಯ ಚಂದಯ್ಯನವರೂ ಒಬ್ಬರು. ಕಾಯಕವೇ ಲಿಂಗ ಪೂಜೆ ಎಂದು ಸಾರಿದ ಇವರು ಪ್ರತಿಯೊಬ್ಬರೂ ತಮ್ಮ ತಮ್ಮ ಕರ್ತವ್ಯವನ್ನು ಶ್ರದ್ಧೆಯಿಂದ ಮಾಡಬೇಕು ಎಂದು ತಮ್ಮ ವಚನಗಳ ಮೂಲಕ ಸಮಾಜಕ್ಕೆ ಸಂದೇಶ ನೀಡಿದ್ದಾರೆ ಎಂದು ಕಾನೂನು, ಪ್ರವಾಸೋದ್ಯಮ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.