ಮುಖ್ಯ ನ್ಯಾಯಮೂರ್ತಿಗಳಿಗೆ ಶೂ ಎಸೆಯಲೆತ್ನ ಖಂಡಿಸಿ ಪ್ರತಿಭಟನೆಪಟ್ಟಣದ ತಾಲೂಕು ಕಚೇರಿ ಎದುರು ಸೇರಿದ ದಸಂಸ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಆರೋಪಿ ರಾಕೇಶ್ ಕಿಶೋರ್ ವಿರುದ್ಧ ಘೋಷಣೆ ಕೂಗಿದರು. ಮುಖ್ಯ ನ್ಯಾಯಮೂರ್ತಿ ಬಿ. ಆರ್.ಗವಾಯಿ ಅವರ ಮೇಲೆ ಶೂ ಎಸೆಯುವ ಮೂಲಕ ನ್ಯಾಯಾಂಗದ ಸಾರ್ವಭೌಮತ್ವ, ಭಾರತದ ಸಂವಿಧಾನ ಮತ್ತು ದೇಶದ ಕಾನೂನು ವ್ಯವಸ್ಥೆ ಮೇಲೆ ನೇರ ದಾಳಿ ಮಾಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಇಂತಹ ಪ್ರಕರಣ ಆಗದಂತೆ ಪೊಲೀಸರು ಎಚ್ಚರ ವಹಿಸಬೇಕು.