ಅಧಿವೇಶನ ಮೊದಲ ದಿನವೇ ಒಳಮೀಸಲಾತಿ ನೀಡಲಿಒಳ ಮೀಸಲಾತಿ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಣ್ಣೊರೆಸುವ ತಂತ್ರ ಅನುಸರಿಸುತ್ತಿದೆ. ಒಳ ಮೀಸಲಾತಿ ಜಾರಿಗಾಗಿ ಆ.15ರಂದು ಕಪ್ಪು ಬಾವುಟ ಪ್ರದರ್ಶನ, ಒಳ ಮೀಸಲಾತಿ ಸಿಗುವವರೆಗೂ ಹೋರಾಟ ನಿಶ್ಚಿತವಾಗಿದೆ. ಹೋರಾಟದಿಂದ ಹಿಂದಡಿ ಇಡುವ ಪ್ರಶ್ನೆಯೇ ಇಲ್ಲ ಎಂದು ಮಾದಿಗ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕ ಎಚ್ಚರಿಸಿದೆ.