ದಶಕಗಳಿಂದ ಈ ಗ್ರಾಮಕ್ಕಿಲ್ಲ ಸುಸಜ್ಜಿತ ರಸ್ತೆಸುಮಾರು 150ಕ್ಕೂ ಅಧಿಕ ಮಂದಿ ವಾಸವಿರುವ ಇಲ್ಲಿಗೆ ತೆರಳುವ ರಸ್ತೆ ಅಭಿವೃದ್ಧಿಗೆ ಹಲವು ಬಾರಿ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು. ಗ್ರಾಮ ಪಂಚಾಯಿತಿಯಾಗಲಿ, ಜನ ಪ್ರತಿನಿಧಿಗಳಾಗಲಿ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ಸ್ಥಳೀಯರು, ಇಲ್ಲಿನ ವಿದ್ಯಾರ್ಥಿಗಳು, ವಿಕಲಚೇತನರು, ಕಾರ್ಮಿಕರು ಸೇರಿದಂತೆ ಸಾರ್ವಜನಿಕರು, ಕಾಡುಪ್ರಾಣಿಗಳ ಆತಂಕದ ನಡುವೆ ನಡೆದಾಡಲು ಕೂಡ ಯೋಗ್ಯವಲ್ಲದ ಇದೇ ರಸ್ತೆಯನ್ನೇ ಅವಲಂಬಿಸಬೇಕಾಗಿದೆ.