ಶೂ ಎಸೆತ ಸಂವಿಧಾನ ಮೇಲೆ ನಡೆಸಿದ ದಾಳಿಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯುವ ಪ್ರಯತ್ನ ಕೇವಲ ವ್ಯಕ್ತಿ ಮೇಲೆ ನಡೆದ ಘಟನೆಯಲ್ಲ. ಸಂವಿಧಾನ, ಪ್ರಜಾಪ್ರಭುತ್ವ ಮೌಲ್ಯಗಳ ಮೇಲಿನ ದಾಳಿಗೆ ಸಾಕ್ಷಿಯಾಗಿದ್ದು, ಕೂಡಲೇ ನ್ಯಾಯವಾದಿ ರಾಕೇಶ್ ಕಿಶೋರ್ ಅವರನ್ನು ಬಾರ್ ಕೌನ್ಸಿಲ್‌ನಿಂದ ರದ್ದುಪಡಿಸಿ ಕಾನೂನಿನಡಿ ಬಂಧಿಸಬೇಕು ಎಂದು ವಕೀಲರ ಸಂಘದ ತಾಲೂಕು ಅಧ್ಯಕ್ಷ ಮರೇನಹಳ್ಳಿ ಟಿ. ಬಸವರಾಜ್ ಒತ್ತಾಯಿಸಿ, ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.