ರೈತರಿಗೆ ಸಬ್ಸಿಡಿ, ಪ್ರಸಾದ್ ಯೋಜನೆಗೆ ಕೊಲ್ಲೂರು: ಬಿವೈಆರ್ ಮನವಿದಕ್ಷಿಣ ಭಾರತದ ಆಧ್ಯಾತ್ಮಿಕ ಕ್ಷೇತ್ರದ ಮೂಲಾಧಾರವಾಗಿರುವ ಆದಿ ಶಂಕರಾಚಾರ್ಯರು ಪ್ರತಿಷ್ಠಾಪಿಸಿದ ಕೊಲ್ಲೂರು ಮೂಕಾಂಬಿಕಾ ದೇವಾಲಯದ 50 ಕಿ.ಮೀ. ವ್ಯಾಪ್ತಿಯಲ್ಲಿ ನದಿ, ಕಡಲ ತೀರಗಳು, ಗಿರಿಧಾಮಗಳು, ಹಿನ್ನೀರು ಮತ್ತು ಮುಂಬರುವ ವಾಯುನೆಲೆಗಳಿದ್ದು, ಈ ಪ್ರದೇಶವನ್ನು ಭೌಗೋಳಿಕತೆ ಮತ್ತು ಆಧ್ಯಾತ್ಮಿಕತೆಯ ಸಮಗ್ರ ದೃಷ್ಟಿಯಿಂದ ಅಭಿವೃದ್ಧಿಗೆ ಪ್ರವಾಸೋದ್ಯಮ ಸಚಿವಾಲಯದ ಪ್ರಸಾದ್ ಯೋಜನೆಯಡಿ ಅನುದಾನವನ್ನು ಬಿಡುಗಡೆ ಮಾಡುವಂತೆ ಸಂಸದರು ಮನವಿ ಮಾಡಿದರು.