ಯೂರಿಯಾಕ್ಕಾಗಿ ಚನ್ನಗಿರಿಯಲ್ಲಿ ಬಿಜೆಪಿ ಪ್ರತಿಭಟನೆರಸಗೊಬ್ಬರ ಕೊರತೆ ಖಂಡಿಸಿ ತಾಲೂಕು ಬಿಜೆಪಿ ವತಿಯಿಂದ ಯೂರಿಯಾ ಗೊಬ್ಬರ ಕೊಡಿ, ಇಲ್ಲವೇ ವಿಷ ಕೊಡಿ ಎಂಬ ಘೋಷಣೆಯೊಂದಿಗೆ ಬುಧವಾರ ಬಿಜೆಪಿಯಿಂದ ದಾವಣಗೆರೆ ವಿ.ವಿ.ಯ ಮಾಜಿ ಸಿಂಡಿಕೇಟ್ ಸದಸ್ಯ, ತಾಲೂಕು ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ್ ನೇತೃತ್ವದಲ್ಲಿ ನೂರಾರು ರೈತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪಟ್ಟಣದ ಕೃಷಿ ಇಲಾಖೆ ಮತ್ತು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ, ಅಧಿಕಾರಿಗಳಿಗೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.