ಕ್ರೀಡಾ ಪ್ರತಿಭೆಗಳ ಅನಾವರಣದಲ್ಲಿ ದೈಹಿಕ ಶಿಕ್ಷಕರ ಪಾತ್ರ ಮಹತ್ವದ್ದುಮಕ್ಕಳ ಕ್ರೀಡಾ ಪ್ರತಿಭೆ ಹೊರಹಾಕಲು ದೈಹಿಕ ಶಿಕ್ಷಣ ಶಿಕ್ಷಕರು ಆತ್ಮಸಾಕ್ಷಿಯಿಂದ ಕಾರ್ಯ ಮಾಡುವಂತೆ ಹಾಸನದ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶ್ರೀ ಶಂಭುನಾಥ ಮಹಾಸ್ವಾಮೀಜಿ ಕರೆ ನೀಡಿದ್ದಾರೆ. ಮಾತೃ ವಾತ್ಸಲ್ಯದಂತೆ ದೈಹಿಕ ಶಿಕ್ಷಣ ಶಿಕ್ಷಕರು ಕಾರ್ಯ ಮಾಡಿ, ಕ್ರೀಡಾ ಕ್ಷೇತ್ರದಲ್ಲಿ ಮಕ್ಕಳು ಬೆಳಗುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ನಿಮ್ಮ ಪಾತ್ರ ಹೆಚ್ಚಾಗಿದೆ ಎಂದರು. ದೈಹಿಕ ಶಿಕ್ಷಣ ಶಿಕ್ಷಕರಲ್ಲಿ, ಮತ್ತಷ್ಟು ಚೈತನ್ಯ ತುಂಬಲು, ತರಬೇತಿ ನಡೆಯುತ್ತಿದೆ ಎಂದರು.