ಗಣತಿದಾರರಿಗೆ 150 ಮನೆ ಸೀಮಿತ ಮಾಡಿ: ಸರ್ಕಾರಿ ನೌಕರರ ಸಂಘದಿಂದ ಜಿಬಿಎ ಮುಖ್ಯ ಆಯುಕ್ತರಿಗೆ ಮನವಿಬೆಂಗಳೂರು ನಗರ ಜಿಲ್ಲೆಯಲ್ಲಿ ಕೆಲವು ಗಣತಿದಾರರಿಗೆ 250 ಮನೆಗಳ ಗಣತಿ ಕಾರ್ಯ ಹಂಚಿಕೆ ಮಾಡುವ ಬದಲು 150 ಮನೆಗಳನ್ನು ಮಾತ್ರ ಸೀಮಿತಗೊಳಿಸಬೇಕು ಎಂಬುದು ಸೇರಿದಂತೆ ಗಣತಿದಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಮನವಿ ಮಾಡಿದೆ.