ಸಿಜೆಐ ಗವಾಯಿ ಮೇಲಿನ ಶೂ ದಾಳಿ ಖಂಡಿಸಿ ಪ್ರತಿಭಟನೆಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಹಿರಿಯ ವಕೀಲರೊಬ್ಬರು ಶೂ ಎಸೆದು ಅವಮಾನ ಮಾಡಿದ ಘಟನೆ ಖಂಡಿಸಿ, ನಗರದಲ್ಲಿ ದಲಿತ ಸಂಘಟನೆಗಳ ಒಕ್ಕೂಟ ಬುಧವಾರ ಆಕ್ರೋಶ ವ್ಯಕ್ತಪಡಿಸಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಧರಣಿ ನಡೆಸಿದರು.ಸಂಘಟನೆಯವರು ಸರ್ಕಾರದಿಂದ ನ್ಯಾಯಾಂಗದ ಗೌರವವನ್ನು ಕಾಪಾಡಲು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಇಂತಹ ಧಾರ್ಮಿಕ ಅಂಧಭಕ್ತಿಯ ಹೆಸರಿನಲ್ಲಿ ನಡೆಯುವ ಹಿಂಸಾತ್ಮಕ ನಡವಳಿಕೆಗಳನ್ನು ತಡೆಗಟ್ಟಬೇಕೆಂದು ಒತ್ತಾಯಿಸಿದರು.