ಶೀಘ್ರದಲ್ಲಿ ರಾತ್ರಿ ವಿಮಾನ ಸಂಚಾರಕ್ಕೆ ಕ್ರಮ: ಎಸ್.ಜಿ. ನಂಜಯ್ಯಮಠ್ಪ್ರಸ್ತುತ ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಹಗಲು ಮಾತ್ರ ವಿಮಾನಯಾನ ಸೇವೆ ಲಭ್ಯವಿದ್ದು, ಮುಂದಿನ ನಾಲ್ಕಾರು ತಿಂಗಳಲ್ಲಿ ರಾತ್ರಿ ವಿಮಾನ ಸಂಚಾರಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಜಿ. ನಂಜಯ್ಯಮಠ್ ಅವರು ಹೇಳಿದರು.