ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ರೋಗಿಗಳಿಗಿಲ್ಲ ಇಎಸ್ಐ ಸೌಲಭ್ಯ : ವೇದವ್ಯಾಸ್ ಕಾಮತ್ಇಎಸ್ಐ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಹೊಂದಾಣಿಕೆ ಅವಧಿಯು ಕಳೆದ ಸಪ್ಟೆಂಬರ್ 30ರಂದು ಅಂತ್ಯಗೊಂಡಿದೆ. ಹೀಗಾಗಿ ಅಕ್ಟೋಬರ್ 1 ರಿಂದ ರೋಗಿಗಳಿಗೆ ತುರ್ತು ಸಂದರ್ಭಗಳಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಮಟ್ಟದ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಲು ಸಾಧ್ಯವಾಗುತ್ತಿಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದ್ದಾರೆ.