ಬೆಸ್ಕಾಂನಲ್ಲಿ ಭ್ರಷ್ಟ ಅಧಿಕಾರಿಗಳ ವಜಾಗೊಳಿಸಿ ಬಂಧಿಸಿನಗರದ ಬೆಸ್ಕಾಂ ವಿಭಾಗೀಯ ಕಚೇರಿ ಉಗ್ರಾಣದ ₹೩.೮೫ ಕೋಟಿ ಹಗರಣಕ್ಕೆ ಸಂಬಂಧಿತ ಅಧಿಕಾರಿಗಳನ್ನು ತಕ್ಷಣ ಸೇವೆಯಿಂದ ವಜಾ ಮಾಡಿ, ಬಂಧಿಸಬೇಕು. ಅಲ್ಲದೇ, ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಲು ಕ್ರಮ ಕೈಗೊಳ್ಳಬೇಕೆಂದು ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಉಪಾಧ್ಯಕ್ಷ ನಾಗರಾಜ್ ಭಂಡಾರಿ ಹರಿಹರದಲ್ಲಿ ಆಗ್ರಹಿಸಿದರು.