ವಾಲ್ಮೀಕಿಯವರ ತತ್ವ, ಆದರ್ಶ, ಚಿಂತನೆಗಳನ್ನು ಪಾಲಿಸಿ: ಜಿಲ್ಲಾಧಿಕಾರಿ ಡಾ.ಕುಮಾರವಾಲ್ಮೀಕಿ ಸಾಮಾನ್ಯರಾಗಿ ಜನಿಸಿ ಅಸಾಮಾನ್ಯ ಸಾಧನೆ ಮಾಡಿದವರು. ಅವರು ರಚಿಸಿರುವ ಬೃಹತ್ ವಾಲ್ಮೀಕಿ ರಾಮಾಯಣ ಗ್ರಂಥ ಇಂದಿಗೂ ಎಲ್ಲರ ಮನೆ ಹಾಗೂ ಮನಗಳಲ್ಲಿ ಚಿರಪರಿಚಿತ. ಶ್ಲೋಕ ಮತ್ತು ಕೃತಿಗಳನ್ನು ರಚಿಸುವ ಮೂಲಕ ಸಂಸ್ಕೃತಿ, ಸಂಸ್ಕಾರ, ಪರಂಪರೆ, ಜೀವನದ ಮೌಲ್ಯ ಮತ್ತು ಮಾನವೀಯತೆ ಜಗತ್ತಿಗೆ ಸಾರಿದ್ದಾರೆ.