ಶೃಂಗೇರಿಯಲ್ಲಿ ಭೂಮಿ ಹುಣ್ಣಿಮೆ ಹಬ್ಬದ ಸಂಭ್ರಮಶೃಂಗೇರಿ: ತಾಲೂಕಿನೆಲ್ಲೆಡೆ ಮಂಗಳವಾರ ಭೂಮಿ ಹುಣ್ಣಿಮೆ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಬೆಳಿಗ್ಗೆ ಸೂರ್ಯೋದಯಕ್ಕೂ ಮುನ್ನ ಜಮೀನು, ಹೊಲಗದ್ದೆಗಳಲ್ಲಿ ರೈತರು ಪೂಜಾ ಸಾಮಗ್ರಿಗಳನ್ನಿಟ್ಟು ಶಂಖ, ಜಾಗಟೆ ಭಾರಿಸಿ ಭೂಮಿ ತಾಯಿಗೆ ವಿಶೇಷ ಪೂಜೆ ನೆರವೇರಿಸಿದರು. ಗ್ರಾಮೀಣ ಪ್ರದೇಶದೆಲ್ಲೆಡೆ ಹಬ್ಬದ ಕಹಳೆ ಮೊಳಗಿತು.