ಛಾಯಾಗ್ರಹಣ ಅಕಾಡೆಮಿ ಸ್ಥಾಪಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿಪ್ರಸ್ತುತ ಕರ್ನಾಟಕದಲ್ಲಿ ರಾಜ್ಯದಲ್ಲಿ ಸುಮಾರು 4 ಲಕ್ಷಕ್ಕೂ ಹೆಚ್ಚು ಛಾಯಾಗ್ರಾಹಕರು ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದು, ಛಾಯಾಗ್ರಹಣವೆಂದರೆ ಇಂದು ಕೇವಲ ಕಲೆ ಅಥವಾ ವೃತ್ತಿಯಾಗಿಯೇ ಅಲ್ಲ, ಅದು ಸಂಸ್ಕೃತಿ ಸಂರಕ್ಷಣೆ, ಸಾಮಾಜಿಕ ಬದಲಾವಣೆ, ಶಿಕ್ಷಣ, ತಾಂತ್ರಿಕ ನೈಪುಣ್ಯವರ್ಧನೆ ಹಾಗೂ ಬದುಕು ಕಟ್ಟಿಕೊಳ್ಳುವ ಮಹತ್ವದ ಕ್ಷೇತ್ರವಾಗಿದೆ. ಛಾಯಾಗ್ರಾಹಕರು ಪತ್ರಿಕೋದ್ಯಮ, ಹಬ್ಬ-ಉತ್ಸವ, ವೈವಾಹಿಕ, ನೈಸರ್ಗಿಕ ಮತ್ತು ಸಾಂಸ್ಕೃತಿಕ ಛಾಯಾಗ್ರಹಣದಲ್ಲಿ ತೊಡಗಿಸಿಕೊಂಡಿದ್ದಾರೆ.