ವ್ಯಕ್ತಿಗಿಂತ ವ್ಯಕ್ತಿತ್ವ ದೊಡ್ಡದು ಎಂದ ಕುಮಾರ್ವ್ಯಕ್ತಿಗಿಂತ ವ್ಯಕ್ತಿತ್ವ ದೊಡ್ಡದು, ವ್ಯಕ್ತಿತ್ವಕ್ಕೆ ವ್ಯಕ್ತಿಯನ್ನು ಗೆಲ್ಲುವ ಶಕ್ತಿ ಇರುತ್ತದೆ ಎಂದು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಕುಮಾರ್ ಅಭಿಪ್ರಾಯಪಟ್ಟರು. ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು. ಸಾಮಾಜಿಕ ಪ್ರಜ್ಞೆ, ನಾಡನುಡಿಯ ಬಗ್ಗೆ ಅಭಿಮಾನ ದೇಶಾಭಿಮಾನ, ಸೇವಾ ಮನೋಭಾವ ಮತ್ತು ಸಾಮಾಜಿಕ ಕಳಕಳಿ ವಿದ್ಯಾರ್ಥಿ ದೆಸೆಯಲ್ಲೇ ಮನಸ್ಸಿನಲ್ಲಿ ಭದ್ರವಾಗಿ ಬೇರೂರಬೇಕು. ಇದು ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಗಳಿಂದ ಸಾಧ್ಯ. ಶಿಕ್ಷಣಕ್ಕೆ ಪೂರಕವಾದ ಇಂತಹ ಯೋಜನೆಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕೊಡುಗೆ ನೀಡುತ್ತದೆ ಎಂದು ತಿಳಿಸಿದರು.