ಜಾತಿಗಣತಿ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ ಪರಿಣಾಮ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸನ ಜಿಲ್ಲೆ ಬೇಲೂರಿನ ಹೊಯ್ಸಳ ನಗರದ ಬಡಾವಣೆಯಲ್ಲಿ ಭಾನುವಾರ ಈ ಘಟನೆ ನಡೆದಿದೆ.
ಹಸುವಿನ ಬಾಲಕ್ಕೆ ಸೆಂಟ್ ಸ್ಪ್ರೇ ಮಾಡಿ ಲೈಟರ್‌ನಿಂದ ಬಾಲಕನೋರ್ವ ಬೆಂಕಿ ಹಚ್ಚಿದ ಘಟನೆ ಚಿಕ್ಕಮಗಳೂರಿನ ವಿಜಯಪುರ ಬಡಾವಣೆಯಲ್ಲಿ ನಡೆದಿದೆ. 16 ವರ್ಷದ ಬಾಲಕನ ಕೃತ್ಯ ಎಸಗಿದ್ದು ಆತನ ವಿರುದ್ಧ ಸ್ಥಳೀಯರಲ್ಲಿ ಆಕ್ರೋಶ ಮೂಡಿಸಿದೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಳಿಕ ಕೇಂದ್ರದ ರೇಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರೂ ಜಾತಿ ಗಣತಿಗೆ ಬಂದಿದ್ದ ಗಣತಿದಾರರ ತರೇಹವಾರಿ ಪ್ರಶ್ನೆಗಳಿಗೆ ಗರಂ ಆಗಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾರೂ ಮಾತನಾಡಬಾರದು ಎಂಬ ಹೈಕಮಾಂಡ್ ಎಚ್ಚರಿಕೆಯ ನಡುವೆಯೂ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಕಾಂಗ್ರೆಸ್ ನಾಯಕರ ಹೇಳಿಕೆ ಮುಂದುವರಿದಿದೆ
ಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿಯಲ್ಲಿ ನಡೆದ ಹುಲಿ ಹತ್ಯೆ ಪ್ರಕರಣದಲ್ಲಿ ಐವರು ಆರೋಪಿಗಳು ಭಾಗಿಯಾಗಿರುವ ಶಂಕೆ ಇದ್ದು, ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ. ಹಸುವನ್ನು ತಿಂದು ಹಾಕಿದ್ದಕ್ಕೆ ಪ್ರತೀಕಾರವಾಗಿ ಆರೋಪಿಗಳು ಸತ್ತ ಹಸುವೊಂದಕ್ಕೆ ವಿಷ ಬೆರೆಸಿದ್ದರು.
ರಸ್ತೆ ಗುಂಡಿಗಳಿಗೆ ಟಾರು ಹಾಕಿ ‘ರೋಲರ್’ ಹರಿಸುವ ಬದಲು ಬರೀ ‘ತೇಪೆ’ ಕಾಮಗಾರಿ ನಡೆಸಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಗುಂಡಿ ಮುಚ್ಚುವ ಕಾರ್ಯಕ್ಕೆ ಸಾರ್ವಜನಿಕರು ತೀವ್ರ ಟೀಕೆ . ನೀವು ಹೀಗೆ ಗುಂಡಿ ಮುಚ್ಚುವ ಬದಲು ಅವುಗಳನ್ನು ಹಾಗೆಯೇ ಬಿಟ್ಟು ಬಿಟ್ಟರು ತೊಂದರೆ ಇಲ್ಲ ಎಂದು ಟೀಕಿಸಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಗಣತಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವ ಲಾಡ್, ಈ ತರಹದ ವೈಜ್ಞಾನಿಕ ಸಮೀಕ್ಷೆ ದೇಶದಲ್ಲಿ ಎಲ್ಲೂ ಆಗಿಲ್ಲ. ಎಲ್ಲ ಜಾತಿಗಳಲ್ಲಿ ಬಡವರಿದ್ದಾರೆ ಎಂಬುದು ಸತ್ಯ.