ಸಂಸ್ಕಾರ ಕೊರತೆಯಿಂದ ಸಮಾಜದಲ್ಲಿ ಅಪರಾಧ ಹೆಚ್ಚಳ: ಪಿಎಸ್‌ಐ ಸುನಿಲ್ ಕುಮಾರ್ಸಂಸ್ಕಾರದ ಕೊರತೆಯಿಂದ ಸಮಾಜದಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಮಠ-ಮಾನ್ಯಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಪೋಷಕರು ಹೆಚ್ಚಾಗಿ ತಮ್ಮ ಮಕ್ಕಳನ್ನು ಕರೆದುಕೊಂಡು ಬರುವ ಮೂಲಕ ಮಕ್ಕಳನ್ನು ಸನ್ಮಾರ್ಗದಲ್ಲಿ ನಡೆಯುವಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ ಪೋಷಕರ ಮೇಲಿದೆ ಎಂದು ಹೊನ್ನಾಳಿ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಎಚ್.ಸುನಿಲ್ ಕುಮಾರ್ ತಿಳಿಸಿದರು.