೧೧ರಂದು ಶ್ರೀಕೃಷ್ಣಾರ್ಪಣಂ ಸಮಾರಂಭ: ಆಮಂತ್ರಣ ಬಿಡುಗಡೆಸುಜ್ಞಾನ ಸೇವಾ ಸಂಸ್ಥೆ ಉತ್ತರ ಕನ್ನಡ, ಗೌತಮ ಜುವೆಲ್ಲರ್ಸ್ ಯಲ್ಲಾಪುರ ಹಾಗೂ ಹ್ಯಾಂಗ್ಯೋ ಐಸ್ ಕ್ರೀಂ, ಜ್ಞಾನೇಶ್ವರಿ ಮಹಿಳಾ ಮಂಡಳಿ ಮತ್ತು ರಂಗ ಸಹ್ಯಾದ್ರಿ ಸಹಯೋಗದಲ್ಲಿ ಐದನೇ ವರ್ಷದ ಶ್ರೀಕೃಷ್ಣಾರ್ಪಣಂ ಸಮಾರಂಭವು ಅ.೧೧ರಂದು ಬೆಳಗ್ಗೆ ೧೦.೩೦ಕ್ಕೆ ಪಟ್ಟಣದ ಎಪಿಎಂಸಿ ಆವಾರದ ಅಡಿಕೆ ಭವನದಲ್ಲಿ ನಡೆಯಲಿದೆ ಎಂದು ಸುಜ್ಞಾನ ಸೇವಾ ಸಂಸ್ಥೆಯ ಅಧ್ಯಕ್ಷ ಜಿ.ಎನ್. ಭಟ್ಟ ತಟ್ಟಿಗದ್ದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.