ಕೃಷಿ ವಿವಿ ರೂವಾರಿ ಚಲುವರಾಯಸ್ವಾಮಿಗೆ ಅಭಿನಂದನೆ: ಬೇಕ್ರಿ ರಮೇಶ್ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಅದರ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳ ಕೃಷಿ ಕಾಲೇಜುಗಳನ್ನು ಸೇರಿಸುವುದಕ್ಕೆ ಸಚಿವರು ಶ್ರಮಪಟ್ಟಿದ್ದಾರೆ. ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರು ಹಾಸನ ಜಿಲ್ಲೆಯ ಕೃಷಿ ಕಾಲೇಜುಗಳನ್ನು ಮಂಡ್ಯ ಕೃಷಿ ವಿವಿಗೆ ಸೇರಿಸುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ನಿಲುವು ಸರಿಯಲ್ಲ. ಅಭಿವೃದ್ಧಿಗೆ ಎಲ್ಲಾ ಪಕ್ಷಗಳ ರಾಜಕಾರಣಿಗಳು ಕೈ ಜೋಡಿಸಬೇಕು. ಇದರಲ್ಲಿ ಯಾವುದೇ ಪಕ್ಷಭೇದ ಮಾಡಬಾರದು.