ದ.ಕ.ದಲ್ಲಿ ಸರ್ಕಾರದಿಂದ ಮಂಜೂರಾದ ಜಮೀನುಗಳ ಪೋಡಿ ಅಭಿಯಾನಸರ್ಕಾರದಿಂದ ಇದುವರೆಗೆ ಮಂಜೂರಾದ ಎಲ್ಲ ಬಗೆಯ ಜಮೀನುಗಳ ಪೋಡಿ ಅಭಿಯಾನವನ್ನು ದ.ಕ. ಜಿಲ್ಲಾಡಳಿತ ಕೈಗೆತ್ತಿಕೊಂಡಿದ್ದು, ಇದಕ್ಕಾಗಿ ಹೊರ ಜಿಲ್ಲೆಗಳಿಂದ 50 ಲೈಸನ್ಸ್ಡ್ ಸರ್ವೇಯರ್ಗಳನ್ನು ಕರೆಸಿದೆ. ತಮ್ಮ ಜಮೀನಿನ ದಾಖಲೆಗಳಿಗೆ ಸಂಬಂಧಿಸಿದಂತೆ ಅತ್ಯಂತ ಉಪಯುಕ್ತವಾಗಲಿರುವ ಈ ಪೋಡಿ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮನವಿ ಮಾಡಿದ್ದಾರೆ.