ಚುನಾವಣಾ ಅಕ್ರಮ: ನಾಳೆ ಬೆಂಗ್ಳೂರಲ್ಲಿ ರ್ಯಾಲಿಲೋಕಸಭೆ ಚುನಾವಣೆಯಲ್ಲಿ ನಡೆದಿರುವ ಅಕ್ರಮ ವಿರುದ್ದ ಹೋರಾಟ ಮಾಡಲು ಬೆಂಗಳೂರಿನಲ್ಲಿ ಸಂಸದ ರಾಹುಲ್ ಗಾಂಧಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಆ. ೫ ರಂದು ನಡೆಯುವ ಪ್ರತಿಭಟನೆಗೆ ಜಿಲ್ಲೆಯ ಎಂಟು ಬ್ಲಾಕ್‌ನಿಂದ ಒಂದು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ತಿಳಿಸಿದರು.