‘ನಾನು ಯಾವಾಗ ಕರ್ನಾಟಕಕ್ಕೆ ಬಂದರೂ ನಿಮ್ಮದು (ಮಾಧ್ಯಮದವರದ್ದು) ಒಂದೇ ಅಜೆಂಡಾನಾ? ಈ ಸರ್ಕಾರ, ಮುಖ್ಯಮಂತ್ರಿ ಐದು ವರ್ಷ ಇರ್ತಾರಾ?, ಎರಡೂವರೆ ವರ್ಷಕ್ಕೆ ಸರ್ಕಾರ ಬದಲಾಗುತ್ತಾ? ಅಂತ ಬರೀ ಇದೇ ಪ್ರಶ್ನೆ ಕೇಳುತ್ತೀರಿ. ಪಕ್ಷದಲ್ಲಿ ಯಾವಾಗ ಏನಾಗಬೇಕೆಂದು ನಿರ್ಧರಿಸುವ ಸಾಮರ್ಥ್ಯ ಕಾಂಗ್ರೆಸ್‌ಗಿದೆ.
ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ನೆರಪೀಡಿತ ಜಿಲ್ಲೆಗಳಿಗೆ ಖುದ್ದು ಪ್ರವಾಸ ಮಾಡಿ ವಾಸ್ತವಾಂಶಗಳನ್ನು ತಿಳಿದುಕೊಳ್ಳುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ ನೇತೃತ್ವದ ಬಿಜೆಪಿ ನಿಯೋಗ ಶುಕ್ರವಾರ ಬೆಳಗಾವಿ ಜಿಲ್ಲೆಯ ಅತಿವೃಷ್ಟಿಪೀಡಿತ ಪ್ರದೇಶಗಳ ಸಮೀಕ್ಷೆ ಕೈಗೊಂಡಿತು. ಜಿಲ್ಲೆಯ ಬೈಲಹೊಂಗಲ, ಕಾಗವಾಡ ಮತ್ತು ಚಿಕ್ಕೋಡಿ ತಾಲೂಕುಗಳಿಗೆ ಭೇಟಿ ನೀಡಿ, ಪರಿಸ್ಥಿತಿಯ ಅವಲೋಕನ ನಡೆಸಿತು
ನೇರಮಾತು, ನಿಷ್ಠುರ ದನಿ, ಪ್ರಖರ ಚಿಂತನೆ, ಸ್ಪಷ್ಟ ರಾಜಕೀಯ ನಿಲುವು ಮತ್ತು ಪ್ರಜಾಪ್ರಭುತ್ವದ ಮೇಲೆ ಗಾಢ ನಂಬಿಕೆ ಇಟ್ಟಿದ್ದ ಪತ್ರಕರ್ತ, ಸಂಪಾದಕ, ಲೇಖಕ, ಜೀವನಚರಿತ್ರಕಾರ, ಪ್ರಬಂಧಕಾರ ಟಿಜೆಎಸ್ ಜಾರ್ಜ್ ಬರೆವಣಿಗೆ ನಿಲ್ಲಿಸಿದ್ದಾರೆ.
ಖ್ಯಾತ ಪತ್ರಕರ್ತ, ಲೇಖಕ ಹಾಗೂ ‘ಕನ್ನಡಪ್ರಭ’ ಪತ್ರಿಕೆ ಅಂಕಣಕಾರರಾಗಿದ್ದ ಪದ್ಮಭೂಷಣ ಟಿ.ಜೆ.ಎಸ್.ಜಾರ್ಜ್ (97) ಅವರು ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ಹೊಂದಿದ್ದಾರೆ.
ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ವನ್ಯಜೀವಿಧಾಮದಲ್ಲಿ ವಿಷವಿಕ್ಕಿ 5 ಹುಲಿಗಳ ಹತ್ಯೆ ಮಾಡಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹುಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದೆ.