ಕಾಡಾನೆ ಹಾವಳಿ: ಶಾಶ್ವತ ಪರಿಹಾರಕ್ಕೆ ಆರತಿಕೃಷ್ಣ ಮನವಿಬಾಳೆಹೊನ್ನೂರು, ಶೃಂಗೇರಿ ಕ್ಷೇತ್ರದ ವಿವಿಧೆಡೆ ಕಾಡಾನೆಗಳು ಮಿತಿಮೀರಿದ ಹಾವಳಿ ಉಂಟು ಮಾಡುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಐದು ಜನರ ಪ್ರಾಣ ಹಾನಿಯನ್ನೂ ಮಾಡಿದೆ. ಈ ಹಿನ್ನೆಲೆಯಲ್ಲಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಕೋರಿ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅರಣ್ಯ ಸಚಿವ ಈಶ್ವರ್ ಬಿ.ಖಂಡ್ರೆ ಅವರಿಗೆ ಮನವಿ ಸಲ್ಲಿಸಿದ್ದಾರೆ.