ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿಕನ್ನಡಪ್ರಭ ವಾರ್ತೆ ವಿಜಯಪುರ ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ಬಿ.ಎಸ್.ರಾಠೋಡ ಸೂಚಿಸಿದರು. ಚಡಚಣ ಹಾಗೂ ಇಂಡಿ ತಾಲೂಕಿನ ವಿವಿಧ ಗ್ರಾಪಂಗಳಿಗೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಸೇರಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಸೂಚನೆ ನೀಡಿದರು. ಚಡಚಣ ತಾಲೂಕಿನ ನಂದರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಪರಿಸರ ಸ್ವಚ್ಛತೆ, ಮಕ್ಕಳ ಕಲಿಕಾ ಸಾಮರ್ಥ್ಯದ ಗುಣಮಟ್ಟ ಹೆಚ್ಛಳಕ್ಕೆ ಆದ್ಯತೆ ನೀಡಬೇಕು.