ದೇಶದ ಅಭಿವೃದ್ಧಿಗೆ ಸಾರ್ವತ್ರಿಕ ಶಿಕ್ಷಣ ಅಗತ್ಯ: ಡಾ.ಪ್ರಕಾಶ್ ಸಿ.ಎಂ.ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿನ ಜನರ ವೈಯಕ್ತಿಕ ಬೆಳವಣಿಗೆಯ ಸಾಮರ್ಥ್ಯವನ್ನು ಹೆಚ್ಚಿಸಲು, ಭಾವನಾತ್ಮಕ ಮತ್ತು ಸಾಮಾಜಿಕ ಬೆಳವಣಿಗೆಯ ಸಮಾನವಾದ ಅವಕಾಶ ಕಲ್ಪಿಸಲು ಸಾರ್ವತ್ರಿಕ ಶಿಕ್ಷಣ ಅಗತ್ಯ ಎಂದು ಚಳ್ಳಕೆರೆಯ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಪ್ರಕಾಶ್ ಸಿ.ಎಂ. ಅಭಿಪ್ರಾಯಪಟ್ಟರು.