ಹಾಸ್ಟೆಲ್‌ಗಳಲ್ಲಿ ಮೂಲ ಸೌಕರ್ಯಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್ ಗಳಲ್ಲಿ ಮೂಲಭೂತ ಸೌಲಭ್ಯವನ್ನು ಸರಿಪಡಿಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಸರಿಯಾದ ಹಾಸ್ಟೆಲ್ ವ್ಯವಸ್ಥೆ ಹಾಗೂ ವಿದ್ಯಾರ್ಥಿ ವೇತನವನ್ನು ನೀಡದೇ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ. ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ವ್ಯಾಪ್ತಿಯಲ್ಲಿ ೧,೨೫೮ ಹಾಸ್ಟೆಲ್‌ಗಳಿದ್ದು ೧,೬೮,೮೩೩ ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿ ವಾಸವಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ೧೯೭೨ ವಸತಿ ನಿಲಯಗಳಿದ್ದು ೧,೮೭,೨೦೦ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ಉಳಿಯಲು ಅವಕಾಶ ನೀಡಬಹುದಾಗಿದೆ ಎಂದರು.