13ನೇ ಆವೃತ್ತಿಯ ಬಹುನಿರೀಕ್ಷಿತ ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ಗೆ ಮಂಗಳವಾರ ಚಾಲನೆ ಸಿಗಲಿದೆ. ಭಾರತ ಹಾಗೂ ಶ್ರೀಲಂಕಾ ಟೂರ್ನಿಗೆ ಆತಿಥ್ಯ ವಹಿಸಲಿದ್ದು, ಈ ಎರಡು ತಂಡಗಳೇ ಉದ್ಘಾಟನಾ ಪಂದ್ಯದಲ್ಲಿಂದು ಪರಸ್ಪರ ಸೆಣಸಾಡಲಿವೆ.
ರಾಜ್ಯ ಸರ್ಕಾರಿ ಯೋಜನೆಗಳಿಗೆ ನಡೆಯುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಕ್ರಮ, ಪರಿಹಾರ ನೀಡಿಕೆಯಲ್ಲಿ ಅನ್ಯಾಯ, ಅವ್ಯವಹಾರ ತಡೆಯಲು ರಾಜ್ಯದಲ್ಲಿ ಆನ್‌ಲೈನ್ ಆಧಾರಿತ ಏಕೀಕೃತ ಭೂಸ್ವಾಧೀನ ವ್ಯವಸ್ಥೆ-ದತ್ತಾಂಶ ಮಾದರಿ ಜಾರಿಗೆ ತರಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಕ್ಕೆ ಎದುರಾಗಿರುವ ಕಾನೂನು ಕಗ್ಗಂಟು ಬಗೆಹರಿಯುವವರೆಗೆ ಕಳೆದ ವರ್ಷ ಕಾರ್ಯನಿರ್ವಹಿಸಿದ್ದ ಅತಿಥಿ ಉಪನ್ಯಾಸಕರನ್ನೇ 2025-26ನೇ ಸಾಲಿನ ಹಾಲಿ ಸೆಮಿಸ್ಟರ್ ಪೂರ್ಣಗೊಳ್ಳುವವರೆಗೆ ಮುಂದುವರಿಸಲು ಸರ್ಕಾರ ಅನುಮತಿ ನೀಡಿದೆ.
ಮಹಿಳೆ ಗೌರವದ ಬಗ್ಗೆ ಹೇಳುವ ಮನುಸ್ಮೃತಿಯ ಶ್ಲೋಕ ಮತ್ತು ದೇಶದ ಸ್ವಾತಂತ್ರ್ಯ ಕುರಿತು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಹೇಳಿಕೆ ಉಲ್ಲೇಖಿಸಿದ ಹೈಕೋರ್ಟ್, ‘ಯುವತಿ ಮೇಲೆ ಅತ್ಯಾಚಾರ ನಡೆಸಲು ಆರೋಪಿಯೊಬ್ಬನಿಗೆ ಸಹಕಾರ ನೀಡಿದ ಆರೋಪದಲ್ಲಿ ಒಳಗಾಗಿರುವ ವ್ಯಕ್ತಿಗೆ ಜಾಮೀನು ನೀಡಲು ನಿರಾಕರಿಸಿದೆ.
ರಾಜ್ಯ ಸರ್ಕಾರದ ಎಲ್ಲ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಬಿಟ್ಟೂ ಬಿಡದೇ ಸುರಿಯುತ್ತಿದ್ದ ಮಳೆರಾಯ, ಸೋಮವಾರ ಕೊಂಚ ಮುನಿಸು ತಣ್ಣಗಾಗಿಸಿದಂತೆ ಕಂಡುಬಂದಿತ್ತು. ಸತತ ಮಳೆಯಿಂದ ಜರ್ಝರಿತಗೊಂಡಿದ್ದ ಜನಜೀವನ ಸೋಮವಾರ ಕೊಂಚ ನಿಟ್ಟುಸಿರು ಬಿಟ್ಟಿದ್ದರು.
ನಗರದ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾನಿಲಯದ ಎರಡು ಮತ್ತು ಮೂರನೇ ಘಟಿಕೋತ್ಸವ ಅ.3 ರಂದು ನಡೆಯಲಿದ್ದು, ಹಿರಿಯ ಕಲಾವಿದೆ ಭಾರತಿ ವಿಷ್ಣುವರ್ಧನ್ ಸೇರಿ ಅನೇಕರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.
ಗುಂಡಿಗಳನ್ನು ಮುಚ್ಚಿದ ಬಳಿಕ ಅಂತಹ ರಸ್ತೆಯನ್ನು ‘ಗುಂಡಿ ಮುಕ್ತ ರಸ್ತೆ’ ಎಂದು ಘೋಷಿಸುವಂತೆ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಚಿಕ್ಕಪೇಟೆ ವಿಭಾಗದ ರಸ್ತೆಗಳಲ್ಲಿ ಬೈಕ್‌ನಲ್ಲಿ ಸಂಚರಿಸಿ ಸಮಸ್ಯೆಗಳನ್ನು ಪರಿಶೀಲಿಸಿದರು