ಕಳೆದೆರಡು ದಿನಗಳಿಗೆ ಹೋಲಿಸಿದರೆ ನೆರೆಯ ಮಹಾರಾಷ್ಟ್ರ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆ ಮತ್ತು ನೆರೆ ಕಡಿಮೆಯಾಗಿದೆ. ಆದರೆ, ಜನರ ಬವಣೆ ಕಡಿಮೆಯಾಗಿಲ್ಲ. ಕಲ್ಯಾಣ ಕರ್ನಾಟಕದ ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್ ಹಾಗೂ ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಗಳಲ್ಲಿ ಸಂಕಷ್ಟ ಹಾಗೆಯೇ ಮುಂದುವರಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರವಾಹಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಂಗಳವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಇಳಿಯಲಿದ್ದಾರೆ.
ಸಮೀಕ್ಷೆ ಬಹಿಷ್ಕರಿಸುವಂತೆ ಕರೆ ನೀಡಿರುವ ಬಿಜೆಪಿ ನಾಯಕರು ಸಾರ್ವಜನಿಕರ ಎದುರು ಬೆತ್ತಲಾಗುತ್ತಿದ್ದಾರೆ. ರಾಜ್ಯ ಸರ್ಕಾರದ ಸಮೀಕ್ಷೆ ಬಗ್ಗೆ ಆಕ್ಷೇಪಿಸುತ್ತಿರುವವರು, ಕೇಂದ್ರ ಸರ್ಕಾರ ನಡೆಸುವ ಜಾತಿ ಗಣತಿಯನ್ನೂ ವಿರೋಧಿಸುತ್ತಾರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
‘ನವೆಂಬರ್ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ. ಬಳ್ಳಾರಿಯವರೇ ಆಗಿರುವ ಬಿ.ನಾಗೇಂದ್ರ ಅವರು ಮತ್ತೆ ಸಂಪುಟ ಸೇರಲಿದ್ದು, ಇನ್ನು 15 ದಿನಗಳಲ್ಲಿ ಅವರಿಗೆ ಸಚಿವರಾಗುವ ಯೋಗ ಕೂಡಿ ಬರಲಿದೆ. ಅವರು ಬಳ್ಳಾರಿ ಉಸ್ತುವಾರಿ ಸಚಿವರಾಗಲಿದ್ದಾರೆ’ ಎಂದು ಸಚಿವ ಜಮೀರ್ ಅಹ್ಮದ್ ತಿಳಿಸಿದ್ದಾರೆ.