ನಾಡಹಬ್ಬ ನಾಡಿನ ಭವ್ಯ ಸಂಸ್ಕೃತಿ, ಸಂಸ್ಕಾರಗಳ ಅಭಿವ್ಯಕ್ತಿಯ ಆಶಯ ಹೊಂದಿದೆ-ಅಂಬಿಗೇರಕನ್ನಡ ನಾಡಿನಲ್ಲಿ ವಿಶಿಷ್ಟವಾಗಿ ಆಚರಿಸುವ ನಾಡಹಬ್ಬವು ನಾಡಿನ ಭವ್ಯ ಸಂಸ್ಕೃತಿ, ಸಂಸ್ಕಾರಗಳ ಅಭಿವ್ಯಕ್ತಿಯ ಆಶಯಗಳನ್ನು ಹೊಂದಿದ್ದು, ಅದರ ಮೂಲ ನೆಲೆಗಟ್ಟನ್ನು ಉಳಿಸಿ, ಬೆಳೆಸಿ ಮುಂದಿನ ಜನಾಂಗಕ್ಕೆ ವರ್ಗಾಯಿಸುವ ಮಹತ್ತರ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ ಎಂದು ಶಿಗ್ಗಾಂವಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಹೇಳಿದರು.