ಡೆಂಘೀ, ಮಲೇರಿಯಾ ನಿಯಂತ್ರಣಕ್ಕೆ ಅಗತ್ಯ ಕ್ರಮದೊಡ್ಡಬಳ್ಳಾಪುರ: ಮಳೆಗಾಲ ಪ್ರಾರಂಭ ಆಗುತ್ತಿದ್ದು, ಈ ಸಂದರ್ಭದಲ್ಲಿ ತೊಟ್ಟಿ, ಚರಂಡಿ ಹಾಗೂ ಇನ್ನಿತರ ಘನ ತ್ಯಾಜ್ಯಗಳಲ್ಲಿ ನೀರು ಶೇಖರಣೆ ಯಾಗಿ ಸೊಳ್ಳೆಗಳು ಉತ್ಪತ್ತಿಗೊಂಡು ಡೆಂಘೀ, ಮಲೇರಿಯಾ, ಚಿಕನ್ ಗುನ್ಯ ನಂತಹ ರೋಗಗಳು ಕಂಡು ಬರುವ ಸಂಭವ ಹೆಚ್ಚಿದ್ದು ರೋಗವನ್ನು ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.