ಗುರು ತೋರಿದ ದಾರಿಯಲ್ಲಿ ಜೀವನದ ತೇರು ಎಳೆಯಿರಿಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠವು ಯುಗಯೋಗಿ, ಜಗದ್ಗುರು ಪದ್ಮಭೂಷಣ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಸಂಸ್ಮರಣಾರ್ಥ ನಡೆಸಿಕೊಂಡು ಬರುತ್ತಿರುವ ಗುರು ತೋರಿದ ದಾರಿ ತಿಂಗಳ ಮಾಮನ ತೇರಿನ 128ನೇ ಹುಣ್ಣಿಮೆಯ ಕಾರ್ಯಕ್ರಮದ ಅಂಗವಾಗಿ 7 ದಿನಗಳ ಕಾಲ ನಡೆದ ಆಧ್ಯಾತ್ಮಿಕ ಚಿಂತನ ಶಿಬಿರದ ಸಮಾರೋಪ ಸಮಾರಂಭವು ಎಂ.ಜಿ ರಸ್ತೆಯ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಇತ್ತೀಚೆಗೆ ಜರುಗಿತು. ಗುರು ತೋರುವ ಸನ್ಮಾರ್ಗದಲ್ಲಿ ನಡೆದು, ನಮ್ಮಲ್ಲಿ ಮೂಡುವ ಜ್ಞಾನವನ್ನು ಪಸರಿಸುವ ಕೆಲಸ ಮಾಡಿಕೊಂಡು ಹೋದಾಗ ಮಾತ್ರ ಈ ಬದುಕಿಗೆ ಅರ್ಥ ಸಿಗಲಿದೆ ಎಂದರು.