ವಿಶ್ವೇಶ್ವರಯ್ಯ ಕ್ರೀಡಾಂಗಣ ಅಭಿವೃದ್ಧಿಗೆ ಅನುದಾನಇದು ಜಿಲ್ಲಾ ಕ್ರೀಡಾಂಗಣವಾಗಿದ್ದು, ಇಲ್ಲಿ ರಾಷ್ಟ್ರೀಯ ಹಬ್ಬಗಳ ಜತೆಗೆ ಜಿಲ್ಲಾ ಮತ್ತು ರಾಜ್ಯಮಟ್ಟದ ಕ್ರೀಡೆಗಳು ನಡೆಸಲು ಅವಕಾಶವಿದೆ, ಅದಕ್ಕೆ ತಕ್ಕಂತೆ ಕ್ರೀಡಾಂಗಣಕ್ಕೆ ಅಗತ್ಯವಿರುವ ಎಲ್ಲಾ ಮೂಲಭೂತ ಅಗತ್ಯತೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಕೇಂದ್ರದ ಘನತೆಗೆ ತಕ್ಕಂತೆ ಕ್ರೀಡಾಂಗಣವನ್ನು ಮತ್ತಷ್ಟು ಅಭಿವೃದ್ದಿಗೊಳಿಸಬೇಕು.