ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿ ಪರಿಶೀಲನೆಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ತಾಲೂಕಿನ ಮಣ್ಣೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೂರ, ಮಣ್ಣೂರ ಹಾಗೂ ಹಂಗರಗಿ ಗ್ರಾಮಗಳಿಗೆ ಜಿಪಂ ಸಿಇಒ ರಿಷಿ ಆನಂದ ಸೋಮವಾರ ಭೇಟಿ ನೀಡಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಿಶೀಲಿಸಿದರು. ಮಣ್ಣೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗೂರ ಗ್ರಾಮದ 422 ಎಫ್‌ಎಚ್‌ಟಿಸಿಗಳನ್ನು ಒದಗಿಸುವ ಕಾಮಗಾರಿ ವೀಕ್ಷಿಸಿ, ನೀರಿನ ಗುಣಮಟ್ಟ ಪರಿಶೀಲಿಸಿದರು.