ಇನ್ನು ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಗೀತಾ ಶಿವರಾಜ್ ಕುಮಾರ್ ಘೋಷಿಸಿದ್ದಾರೆ.
ನಗರದ ಬಂಜಾರ್ ಕನ್ವೆನ್ಷನ್ ಹಾಲ್‌ನಲ್ಲಿ ಶನಿವಾರ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.
ಸ್ವಂತ ಮನೆ ಇದ್ದವರಿಗೆ ಬಿಪಿಎಲ್ ಕಾರ್ಡ್ ಬದಲು ಎಪಿಎಲ್ ಕಾರ್ಡ್ ನೀಡುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಕಿಡಿಕಾರಿದ್ದಾರೆ.
ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷಾ ಕಾರ್ಯ ಕೈಗೊಳ್ಳಲು ನಿರಾಸಕ್ತಿ ತೋರಿದ ಇಬ್ಬರು ಶಿಕ್ಷಕರೂ ಸೇರಿದಂತೆ ಮೂವರು ಸಿಬ್ಬಂದಿಯನ್ನು ಜಿಲ್ಲಾ ಶಿಸ್ತು ಪ್ರಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೇವೆಯಿಂದ ಅಮಾನತುಗೊಳಿಸಿದ್ದಾರೆ.
ಕರ್ತವ್ಯ ನಿರತ ಸಂಚಾರ ಮಹಿಳಾ ಪಿಎಸ್‌ಐ ಹಾಗೂ ಸಿಬ್ಬಂದಿಯೊಂದಿಗೆ ಮದ್ಯದ ಅಮಲಿನಲ್ಲಿ ಅನುಚಿತ ವರ್ತನೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಿಹಾರ ಮೂಲದ ವ್ಯಕ್ತಿಯನ್ನು ಇಂದಿರಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಾನು ಬಸವ ಧರ್ಮ (ಲಿಂಗಾಯತ)ದ ಅನುಯಾಯಿಯಾಗಿದ್ದು, ಜಾತಿ ಆಧಾರಿತ ಜನಗಣತಿಯಲ್ಲಿ ಧರ್ಮದ ಕಾಲಂನಲ್ಲಿ ಲಿಂಗಾಯತ ಧರ್ಮ ಎಂದೇ ಬರೆಸುತ್ತೇನೆ. ಇನ್ನು, ಲಿಂಗಾಯತ ಮತ್ತು ವೀರಶೈವರಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಯವಿದ್ದು, ಇಬ್ಬರ ಆಚರಣೆ ಬೇರೆಬೇರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಮತ್ತು ಶಕ್ತಿ ಯೋಜನೆಗಳು ದುರುಪಯೋಗ ಆಗುತ್ತಿರುವುದು ಗಮನಕ್ಕೆ ಬಂದಿದ್ದು, ಇದಕ್ಕೆ ಕಡಿವಾಣ ಹಾಕಲು ಯೋಜನೆಗಳಲ್ಲಿ ಕೆಲ ಬದಲಾವಣೆ ತರಲು ಚಿಂತನೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ದಿನ ಶೇ.10ರಷ್ಟು ಮನೆಗಳ ಸಮೀಕ್ಷೆಯ ಗುರಿ ನೀಡಿದ ಬೆನ್ನಲ್ಲೇ ಆಮೆಗತಿಯಲ್ಲಿ ಸಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ) ಕಾರ್ಯ ಶನಿವಾರ ವೇಗ ಪಡೆದಿದೆ. ಆದರೆ, ಮುಖ್ಯಮಂತ್ರಿ ನಿಗದಿಪಡಿಸಿದ ಗುರಿ ಮುಟ್ಟಲು ಸಾಧ್ಯವಾಗಿಲ್ಲ.
ಒಂದೆಡೆ ಕಳೆದ 2 ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ, ಇನ್ನೊಂದೆಡೆ ಮಹಾರಾಷ್ಟ್ರದ ಜಲಾಶಯಗಳಿಂದ ಭೀಮಾ ನದಿಗೆ 3.50 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಮಾಡಿದ ಪರಿಣಾಮ ಉತ್ತರ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಕಾಣಿಸಿಕೊಂಡಿದೆ