ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ
ಕೋರಮಂಗಲದ 1ನೇ ಬ್ಲಾಕ್‌ನ ವೆಂಕಟಾಪುರದಲ್ಲಿ ಕೇವಲ 750 ಚದರಡಿಯಲ್ಲಿ ಬರೋಬ್ಬರಿ 6 ಮಹಡಿಯ ಕಟ್ಟಡವು ಗೃಹ ಪ್ರವೇಶಕ್ಕೂ ಮುನ್ನವೇ ಕುಸಿಯುತ್ತಿದ್ದು, ಶುಕ್ರವಾರ ತೆರವು ಕಾರ್ಯ ಆರಂಭಿಸಲಾಗಿದೆ.
ಬೀದಿ ಕಾಮಣ್ಣರ ಹಾವಳಿ ಸೇರಿದಂತೆ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳ ತಡೆಗೆ ಉತ್ತರ ವಿಭಾಗದಲ್ಲಿ ‘ರಾಣಿ ಚೆನ್ನಮ್ಮ ಪಡೆ’ ಯನ್ನು ಕಟ್ಟಿ ಡಿಸಿಪಿ ಬಿ.ಎಸ್.ನೇಮಗೌಡ ಕಾರ್ಯಾಚರಣೆಗಿಳಿಸಿದ್ದಾರೆ.
ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿದೆ. ಸೆ.30ರಂದು ರಾತ್ರಿ 11.55ಕ್ಕೆ ರೈಲು (06257) ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 11.15ಕ್ಕೆ ಮಂಗಳೂರು ತಲುಪಲಿದೆ